Ad

ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ: ಎನ್‌ಐಎ ದಾಳಿ ನಡೆಸಿ ಯುವಕನ ಬಂಧನ

ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.

ಕಾರವಾರ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.

Ad
300x250 2

ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದನು.ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದನು.

ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ್ದಾನೆ ಎಂಬ ಆರೋಪ ಈತನ ಮೇಲಿದೆ.

ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಿದ್ದು, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad