ಅಂಕೋಲಾ : ಶಿರೂರಿನ ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ತಾಲೂಕಿನ ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದಾಗ ಜಗನ್ನಾಥ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರು. ಕಣ್ಮರೆಯಾದ ಜಗನ್ನಾಥ ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಬ್ಬರು ಹೆಣ್ಣು ಮಕ್ಕಳಿಗೆ ಕೆಲಸ ನೀಡುತ್ತೇನೆ. ಈ ಬಗ್ಗೆ ಮಾಹಿತಿ ನೀಡುವಂತೆ ಕುಮಟಾದ ಸೂರಜ್ ನಾಯ್ಕ ಸೋನಿ ಅವರಿಗೆ ಸೂಚಿಸಲಾಗಿದೆ. ಜಗನ್ನಾಥ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಸದ್ಯದಲ್ಲಿಯೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದರು.