Bengaluru 23°C
Ad

ಟಿಪ್ಪರ್ ಲಾರಿ ಚಾಲಕರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ದಂಡ ಹಾಕಿದ ಪೊಲೀಸರು

ಹೆಲ್ಮೆಟ್​ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು  ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಕಾರವಾರ:  ಹೆಲ್ಮೆಟ್​ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು  ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ  ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಟಿಪ್ಪರ್ ಲಾರಿಯನ್ನು ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ.  ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್​ ಹೆಲ್ಮೆಟ್​ಗೆ.

ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್​ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.

ಪೊಲೀಸರು ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ದಂಡದ ರಶೀದಿ ಎಲ್ಲೆಡೆ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ನಾನಾ ರೀತಿಯಾಗಿ ಟ್ರೋಲ್​ ಮಾಡುತ್ತಿದ್ದಾರೆ.

Ad
Ad
Nk Channel Final 21 09 2023
Ad