ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.
ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು(ಸೆ.25) ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮತ್ತೊಂದು ಶವ ಯಾರದ್ದು ಎಂದು ಇನ್ನಷ್ಟೇ ದೃಢಪಡಿಸಬೇಕಿದೆ.ಇನ್ನು ಗುಡ್ಡ ಕುಸಿತದ ರಭಸಕ್ಕೆ ಲಾರಿ ನದಿಗೆ ಬಿದ್ದು ನುಜ್ಜುಗುಜ್ಜಾಗಿದೆ. ಗಂಗಾವಳಿ ನದಿಯಿಂದ ಲಾರಿ ಮತ್ತು ಶವಗಳನ್ನು ಮೇಲೆತ್ತುವ ಕಾರ್ಯ ಪ್ರಗತಿಯಲ್ಲಿದೆ.
Ad