ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರೂರು. ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮೇರೆಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಸಂತ್ರಸ್ತರಿಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ದುರಂತದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಎನ್​ಡಿಆರ್​ಎಫ್ನಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಣ ನೀಡಲಾಗಿತ್ತು. ಶಿರೂರು ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚುವರಿ ಹಣ ಬಿಡುಗಡೆಗೆ ಅಧಿವೇಶನದಲ್ಲಿ ಉತ್ತರ ಕನ್ನಡ ಸಂಸದ ಕಾಗೇರಿ ಮನವಿ ಮಾಡಿದ್ದರು.

ಕಾಗೇರಿ ಮನವಿಗೆ ಸ್ಪಂದಿಸಿದ್ದ ಪ್ರಧಾನಿ ಮೋದಿ 5 ಲಕ್ಷ ರೂ. ಪರಿಹಾರವನ್ನು ಬಿಡುಗಡೆ ಮಾಡಿದ್ದರು. ಇದೀಗ  ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.