ಉತ್ತರ ಕನ್ನಡ : ಅಂಕೋಲಾ ಬಳಿಯ ಶಿರೂರು ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ , ಇದೀಗ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ಶಿರೂರು ಬಳಿ ಆತನ ಟ್ಯಾಂಕರ್ ಗುಡ್ಡ ಕುಸಿತವಾದ ಪಕ್ಕದಲ್ಲೆ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಟ್ಯಾ ಕರ್ ಲಾರಿ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ‘ಚಾಲಕ ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಶರವಣ ಅವರ ಮಾವ ಸೆಂದೀಲ್ ಎಂಬುವವರು ದೂರು ದಾಖಲಿಸಿದ್ದಾರೆ.

ಇನ್ನೂ ಈ ಆತನ ಮೊಬೈಲ್​ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದರು. ಇದೀಗ ಲಾರಿ ಚಾಲಕರಿಂದ ಮಾಹಿತಿ ಸಿಗುತ್ತಿದ್ದಂತೆ ಶರವಣ ಸಂಬಂಧಿಕರು ಶಿರೂರುಗೆ ಬಂದಿದ್ದಾರೆ.