Ad

ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ : 78 ಕುರಿಗಳು ಸಜೀವ ದಹನ

ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.

ಉತ್ತರ ಕನ್ನಡ : ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.

ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು. ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆವರಿಸಿ 78 ಕುರಿಗಳು ಸುಟ್ಟು ಕರಕಲಾಗಿದೆ. 

 

Ad
Ad
Nk Channel Final 21 09 2023