Ad

ಶಿರಸಿಯ ಶೃತಿ ಹೆಗಡೆಗೆ 2024ರ ವಿಶ್ವ ಸುಂದರಿ ಕಿರೀಟ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಶೃತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಶೃತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

Ad
300x250 2

ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಅಮೆರಿಕದ ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯವರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌

 

Ad
Ad
Nk Channel Final 21 09 2023
Ad