ಭಟ್ಕಳ: ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ.
ಮೃತ ಯುವಕನನ್ನು ಗುಳ್ಮಿ ನಿವಾಸಿ ಮುಹಮ್ಮದ್ ನಾಸಿರ್ (33) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

