ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ಶಿವರಾಜ್ (50) ಎಂದು ಗುರುತಿಸಲಾಗಿದೆ.

ವಾಹನದಲ್ಲಿ ಸುಮಾರು 30 ಪ್ರಯಾಣಿಕರಿದ್ದರು, ಅವರಲ್ಲಿ 20 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಶಿವರಾಜ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.