ಹೊಸಪೇಟೆ : ಮಳೆಯ ಹಬ್ಬರಕ್ಕೆ  ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಡಲಾಗಿದ್ದು,  ಪರಿಣಾಮವಾಗಿ ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ಪ್ರವಾಸಿಗರಿಗೆ ವಿಜಯನಗರ ಆಡಳಿತ ಎಚ್ಚರಿಕೆ ನೀಡಿದೆ.

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಸದ್ಯ ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.