Ad

ಬೈಕ್​ ಮತ್ತು ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು

ಬೈಕ್​ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ನಡೆದಿದೆ.

ವಿಜಯನಗರ: ಬೈಕ್​ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ನಡೆದಿದೆ.

Ad
300x250 2

ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.

ಬೈಕ್​ನಲ್ಲಿದ್ದವರು ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಸ್ಪೀಡಾಗಿ ಬಂದ ಕಾರು ಬೈಕ್​ಗೆ ಗುದ್ದಿದೆ. ಗುದ್ದಿದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad