Ad

ಏರ್ಟಿಗಾ ಕಾರು ಡಿವೈಡರ್‌ಗೆ ಡಿಕ್ಕಿ: ಇಬ್ಬರು ಮೃತ್ಯು, ಓರ್ವ ಗಂಭೀರ

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದ NH 50 ರಲ್ಲಿ ಘಟನೆ ನಡೆದಿದೆ.

ವಿಜಯನಗರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದ NH 50 ರಲ್ಲಿ ಘಟನೆ ನಡೆದಿದೆ.

Ad
300x250 2

ಏರ್ಟಿಗಾ ಕಾರೊಂದು ಏಳು ಜನರನ್ನು ಹೊತ್ತು ಸಾಗಿಸುತ್ತಿತ್ತು. ಇಳಕಲ್‍ನಿಂದ ಬೆಂಗಳೂರಿಗೆ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಏರ್ಟಿಗಾ‌ ಕಾರು ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್​ಗೆ ಗುದ್ದಿದೆ. ಅಪಘಾತದಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಡಿಕ್ಕಿ ರಸಭಕ್ಕೆ ಕಾರು ನುಜ್ಜುಗುಜ್ಜಾಗಿದೆ. ಸಾವನ್ನಪ್ಪಿದ ಇಬ್ಬರೂ ಲಿಂಗಸಗೂರು ಮೂಲದ ವ್ಯಕ್ತಿಗಳು ಎಂದು ಹೇಳಲಾಗುತ್ತಿದೆ. ಅತ್ತ ಗಾಯಾಳುಗಳಿಗೆ ಕೂಡ್ಲಿಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad