ವಿಜಯನಗರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದ ಕರಡಿ ಮಾರಣಾಂತಿಕ ದಾಳಿ ಮಾಡಿರುವ ಘಟನೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ನಡೆದಿದೆ.

ಅಮಲಾಪುರ ಗ್ರಾಮದ ಬಸವರಾಜ್ (40) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ಇಂದು ಬೆಳಗ್ಗೆ ಹೊಲದಲ್ಲಿ ಘಟನೆ ನಡೆದಿದ್ದು, ಕರಡಿ ದಾಳಿಗೆ ಜನರು ಬೆಚ್ಚಿ ಬಿದ್ದಿದ್ದಾರೆ. ತಲೆ ಸೇರಿದಂತೆ ನಾನಾ ಭಾಗಗಳಲ್ಲಿ ಕರಡಿ ಪರಚಿದ್ದು, ರೈತನ ತಲೆ ಸೇರಿದಂತೆ ಹಲವು ಭಾಗಗಳಲ್ಲಿ ಗಾಯವಾಗಿದೆ.

ಅಮಲಾಪುರ ಗ್ರಾಮ ವ್ಯಾಪ್ತಿಯ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ಬಸವರಾಜ್ ಅವರಿಗೆ ಗಾಯಗಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ರೈತ ಬಸವರಾಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಡಿ ದಾಳಿಯಿಂದ ಜನರು ಬೆಸತ್ತಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.