ವಿಜಯನಗರ: ಲಾರಿ ಚಾಲಕನ ಮಗಳು ವಿಜಯನಗರ ಜಿಲ್ಲೆಯ ಸಂಜನಾಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆದಿದ್ದಾರೆ.

ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನ ವಿದ್ಯಾರ್ಥಿನಿಯಾಗಿದ್ದಾಳೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಮೂಲದವರು, ತಂದೆ ಲಾರಿ ಡ್ರೈವರ್ ಕೆಲಸ ಮಾಡುತ್ತಿದ್ದಾರೆ.