Ad

371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ : ಯತ್ನಾಳ್

ಕಲ್ಯಾಣ ಕರ್ನಾಟಕ ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. 371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರ: ಕಲ್ಯಾಣ ಕರ್ನಾಟಕ ಭಾಗದ ಜನ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. 371ಜೆ ವಿಶೇಷ ಸ್ಥಾನಮಾನ ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Ad
300x250 2

371ಜೆ ವಿಶೇಷ ಸ್ಥಾನಮಾನಕ್ಕೆ ಧಕ್ಕೆ ತಂದರೆ ಪ್ರತ್ಯೇಕ ರಾಜ್ಯ ಕೇಳುತ್ತೇವೆ ಎಂಬ ತಡೋಳ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ ಪರ ಯತ್ನಾಳ್  ಮಾತನಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ 371ಜೆಗೆ ಯಾರೂ ವಿರೋಧ ಮಾಡಬಾರದು.

ನಿಜಾಮರು ತಮ್ಮ ಕಾಲದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಿಂದೂ ದೇವಾಲಯಗಳನ್ನ ನಾಶ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಕಲಕೇರಿ, ಆಲಮೇಲವರೆಗೂ ನಿಜಾಂ ಬಂದಿದ್ದ. ಹೀಗಾಗಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದು ಹೇಳಿದ್ದಾರೆ.

ಕೊಪ್ಪಳದವರೆಗೆ ಮಾತ್ರ ಹೈದರಾಬಾದ್​ನ​ ನಿಜಾಂ ಹೋಗಿದ್ದ. ಬಳ್ಳಾರಿಯ ಕೆಲವೆಡೆ ಬಂದಿದ್ದಾನೆಂದು ಕಲ್ಯಾಣ ಕರ್ನಾಟಕಕ್ಕೆ ಸೇರಿಸಿದ್ದಾರೆ. ಅದೇ ರೀತಿ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕು ಎಂದಿದ್ದಾರೆ.

 

Ad
Ad
Nk Channel Final 21 09 2023
Ad