ವಿಜಯಪುರ: ಸಂಪುಟ ಪುನರ್ ರಚನೆ, ಸಿಎಂ ನಿರಾಸಕ್ತಿ ವಿಚಾರವಾಗಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಅದನ್ನ ಡಿಸಿಎಂ, ಸಿಎಂ ಗೆ ಕೇಳಬೇಕು. ಯಾರು ಆಸಕ್ತಿ ಹೊಂದಿದ್ದಾರೋ, ಯಾರು ಹೊಂದಿಲ್ಲವೊ ಅವರನ್ನೆ ಕೇಳಬೇಕು ಎಂದರು.
ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ನಿರ್ಧಾರ ಮಾಡುತ್ತೆ. ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ನಾವು ಮಾತನಾಡೋದ್ರಲ್ಲಿ ಅರ್ಥ ಇಲ್ಲ.
ಎಲ್ಲರೂ ದೆಹಲಿ ಹೋಗ್ತಾರೆ, ಪಕ್ಷದ ವರಿಷ್ಠರನ್ನ ಭೇಟಿ ಮಾಡಲು ಹೋಗ್ತಾರೆ. ಹೈಕಮಾಂಡ್ ಭೇಟಿ ಮಾಡಿ ಮಾತನೋಡೋದು ಇರುತ್ತೆ. ಹೇಳೋದು ಕೇಳೋದು ಇರುತ್ತೆ. ಅಭಿಪ್ರಾಯ, ಸಲಹೆ ಪಡೆಯೋದು ಇರುತ್ತೆ ಎಂದ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

