Bengaluru 28°C
Ad

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣ : ನರಳಿ ನರಳಿ ಪ್ರಾಣಬಿಟ್ಟ ಯುವಕ

ಪ್ರೀತಿ ವಿಚಾರಕ್ಕೆ ಪ್ರಿಯಕರನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಿಯಕರ ನರಳಿ ಪ್ರಾಣ ಬಿಟ್ಟಿದ್ದಾನೆ . ಮುದ್ದೇಬಿಹಾಳ ಇತ್ತೀಚೆಗೆ ಪಟ್ಟಣದಲ್ಲಿ ನಡೆದಿದ್ದ ಪ್ರಿಯಕನ ಮೇಲೆ ಪ್ರೆಟ್ರೋಲ್ ಸುರಿದು ಬೆಂಕಿ ಇಟ್ಟ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಹುಲ್ ಬಿರಾದಾರ್ ಸಾವನ್ನಪ್ಪಿದ್ದಾನೆ. ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ರಾಹುಲ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ.

ವಿಜಯಪುರ: ಪ್ರೀತಿ ವಿಚಾರಕ್ಕೆ ಪ್ರಿಯಕರನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಿಯಕರ ನರಳಿ ಪ್ರಾಣ ಬಿಟ್ಟಿದ್ದಾನೆ . ಮುದ್ದೇಬಿಹಾಳ ಇತ್ತೀಚೆಗೆ ಪಟ್ಟಣದಲ್ಲಿ ನಡೆದಿದ್ದ ಪ್ರಿಯಕನ ಮೇಲೆ ಪ್ರೆಟ್ರೋಲ್ ಸುರಿದು ಬೆಂಕಿ ಇಟ್ಟ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಹುಲ್ ಬಿರಾದಾರ್ ಸಾವನ್ನಪ್ಪಿದ್ದಾನೆ. ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ರಾಹುಲ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ.

ಬಳಿಕ ಈ ಕುರಿತು ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದಿಂದ ಬೆಂಗಳೂರಿಗೆ ಮೇ.28 ರಂದು ಯುವಕ ರಾಹುಲ್​ನನ್ನು ರವಾನಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ರಾಹುಲ್ ಬಿರಾದಾರ್ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಯುವತಿಯ ಚಿಕ್ಕಮ್ಮ ಸೀಮಾ, ಚಿಕ್ಕಪ್ಪ ಮುತ್ತಣ್ಣ ಹಾಗೂ ಕೆಲಸಗಾರ ನೀಲಕಂಠ ಅವರಿಗೆ ಸುಟ್ಟ ಗಾಯವಾಗಿತ್ತು. ಈ ಪೈಕಿ ಸೀಮಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ, ಉಳಿದವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Ad
Ad
Nk Channel Final 21 09 2023
Ad