ವಿಜಯಪುರ: ಕಳ್ಳಭಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಗಳಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಖಚಿತ ಮಾಹಿತಿಯನ್ನು ಪಡೆದು ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕುರುಬರದಿನ್ನಿ ತಾಂಡ, ಮುಳವಾಡ ತಾಂಡದಲ್ಲಿ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಕುರುಬರದಿನಿ ತಾಂಡಾದಲ್ಲಿ 35 ಬಿಂದಿಗೆಗಳಲ್ಲಿ ಕಳಬಟ್ಟಿ ತುಂಬಿ ಇಡಲಾಗಿತ್ತು. ಮುಳುವಾಡ ಎಲ್ಟಿ 2 ಬಳಿ ಜಮೀನಿನಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದರು. ಕಳ್ಳಬಟ್ಟಿ ಯನ್ನು ಅಧಿಕಾರಿಗಳು ವಶಪಡಿಸಿಕೊಂಡು ನಾಶಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಮೀನು ಮಾಲೀಕರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

