Ad

ಶಾಲೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯ ಶವ ಪತ್ತೆ

ಯಾದಗಿರಿ ಪಿಎಸ್ಐ ಪರಶುರಾಮ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸಿಸಿಬಿ ಇನ್ಸ್​ಪೆಕ್ಟರ್​​ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸರ್ಕಾರಿ ಶಾಲೆಯ ಸ್ಟಾಕ್ ರೂಮ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯ ಶವ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ವಿಜಯಪುರ: ಯಾದಗಿರಿ ಪಿಎಸ್ಐ ಪರಶುರಾಮ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸಿಸಿಬಿ ಇನ್ಸ್​ಪೆಕ್ಟರ್​​ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸರ್ಕಾರಿ ಶಾಲೆಯ ಸ್ಟಾಕ್ ರೂಮ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯ ಶವ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

2 ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿ.ಎಸ್.ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್​ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ.

. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

Ad
Ad
Nk Channel Final 21 09 2023