ವಿಜಯಪುರ: ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ.
ಇದೀಗ ಆರೋಪಿಗಳಾದ ಪ್ರಶಾಂತ ಬಿರಾದಾರ ಹಾಗೂ ಮುದಕಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸಪ್ಟೆಂಬರ್ 14 ರಂದು ನಡೆದಿದ್ದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಶಾಂತ್ ಬಿರಾದಾರ ಎಂಬುವವರ ಬಳಿಯಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ನಿಂದ ಮುದಕಪ್ಪ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಇದಕ್ಕೂ ಮೊದಲು ಪ್ರಶಾಂತ್ ಬಿರಾದಾರ್ ಕೂಡ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಪರವಾನಿಗೆ ಹೊಂದಿದ ಪಿಸ್ತೂಲ್ನನ್ನು ಮತ್ತೊಬ್ಬರ ಕೈಗೆ ಕೊಟ್ಟ ಪ್ರಶಾಂತ್, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
Ad