ವಿಜಯಪುರ: ಇಂಡಿ ಮತ್ತು ಅಲಮೇಲ ಪಟ್ಟಣಗಳ ಬಸ್ ನಿಲ್ದಾಣಗಳಲ್ಲಿ ಮಹಿಳೆಯ ಚಿನ್ನದ ಸರ ಕಿತ್ಕೊಂಡು ಕಳ್ಳರು ಎಸ್ಕೇಪ್ ಆಗಿರುವ ಘಟನೆ ನಡೆದಿದೆ.

ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಜನದಟ್ಟಣೆಯ ಸಮಯದಲ್ಲಿ ಸರಗಳನ್ನು ಕಸಿದು ಪರಾರಿಯಾಗಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಮತ್ತು ಇದು ಒಂದು ಸಂಘಟಿತ ಗ್ಯಾಂಗ್ ಎಂದು ಶಂಕಿಸಿದ್ದಾರೆ.