ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.
Ad