ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳಿಗೆ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ಹೋಟೆಲ್, ಬೇಕರಿ, ಗ್ಯಾರೇಜ್ ಸೇರಿ ಇನ್ನಿತರೆ ಅಂಗಡಿಗಳು ಸುಟ್ಟು ಹೋಗಿವೆ. ಘಟನೆ ನಡೆದು ಒಂದು ಗಂಟೆ ತಡವಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸುವಂತೆ ಒತ್ತಾಯ ಕೇಳಿಬಂದಿದೆ.
Ad