Bengaluru 22°C
Ad

ಶಾಸಕ ಚೆನ್ನಾರೆಡ್ಡಿ ಪಾಟೀಲ್ 30/ 40 ಲಕ್ಷ ಹಣ ಕೇಳಿದ್ದಾರೆ: ಪರಶುರಾಮ ಪತ್ನಿ ಶ್ವೇತಾ ಆರೋಪ

ಪಿಎಸ್ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ನಿಧನದ ಬಳಿಕ ಪತ್ನಿ ಶ್ವೇತಾ ಮಾಧ್ಯಮ ಮುಂದೆ ಬಂದು ಪ್ರತಿಕ್ರಿಯಿಸಿದ್ದು, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ: ಪಿಎಸ್ಐ ಆಗಿ ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ನಿಧನದ ಬಳಿಕ ಪತ್ನಿ ಶ್ವೇತಾ ಮಾಧ್ಯಮ ಮುಂದೆ ಬಂದು ಪ್ರತಿಕ್ರಿಯಿಸಿದ್ದು, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಶಾಸಕ ಚೆನ್ನಾರೆಡ್ಡಿ ಪಾಟೀಲ್ 30/ 40 ಲಕ್ಷ ಹಣ ಕೇಳಿದ್ದಾರೆ. ಸಾಕಷ್ಟು ಭಾರೀ ಹಣ ಕೇಳ್ತಿರುವ ಬಗ್ಗೆ ‌ನನಗೆ ಹೇಳಿದ್ದಾರೆ. ಎಂಎಲ್ಎ ಹಾಗೂ ಎಂಎಲ್ಎ ಮಗ ಹಣ ಕೇಳಿದ್ದಾರೆ. ಅವರ ಇಬ್ಬರನ್ನೂ ಕರೆಸಿ ಅವರು ಅರೆಸ್ಟ್ ಮಾಡಬೇಕು ಎಂದು ಹೇಳಿದ್ದಾರೆ.

ತಪ್ಪು ಮಾಡಿದರೆ ಅವರನ್ನ ತೆಗೆಬೇಕಿತ್ತು. ಜಾತಿ ಕಾರಣಕ್ಕಾಗಿ ಏಕೆ ತೆಗೆದ್ದೀರಿ. ಈ ಜನರೇಷನ್ ನಲ್ಲೂ ಜಾತಿ ವ್ಯವಸ್ಥೆ ಏನು?. ನಾವು ಎಸ್ಸಿ ಆಗಬೇಕು ಅಂತ ದೇವರಲ್ಲಿ ಕೇಳ್ಕೊಂಡು ಬಂದಿರ್ತಿವಾ?. ಎಂಎಲ್ಎ ತಪ್ಪಿದೆ ಅವರು ಬರಬೇಕು.

ಜಾತಿ, ಹಣಕ್ಕಾಗಿ ನನ್ನ ಗಂಡನ ಜೀವ ಹೋಯ್ತು. ನೀವೆಲ್ಲ ಒಬ್ಬ ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದ್ದೀರಿ. ಎಸ್ಪಿ ಮೇಡಂ ನಮಗೆ ಎಫ್ಐಆರ್ ಕೊಡ್ತಿನಿ ಬನ್ನಿ ಅಂದ್ರು. ಅವರನ್ನ ನಂಬ್ಕೊಂಡು ಖಾಸಗಿ ಆಸ್ಪತ್ರೆಯಿಂದ ಇಲ್ಲಿಗೆ ಬಂದಿದ್ದೀವಿ.

ನನ್ನ ಮಕ್ಕಳಿಗೆ ನಾನು ಏನಂತ ಹೇಳಬೇಕು. ಪೊಲೀಸ್ ಇಲಾಖೆಯಲ್ಲಿ ‌ಮಾನವೀಯತೆ ಇಲ್ಲ. ಎಂಟು ತಿಂಗಳ ಗರ್ಭಿಣಿ ಇದ್ದೀನಿ ರಸ್ತೆಯಲ್ಲಿ ಕುರಿಸಿದ್ದಾರೆ. ಪೊಲೀಸ್ ಅಧಿಕಾರಿಗೆ ನ್ಯಾಯ ಸಿಗ್ತಿಲ್ಲ. ಇನ್ನೂ ಸಾರ್ವಜನಿಕರಿಗೆ ಎಲ್ಲಿ ನ್ಯಾಯ ಸಿಗುತ್ತೆ ಎಂದು ಪರಶುರಾಮ ಪತ್ನಿ ಶ್ವೇತಾ ಕಿಡಿಕಾರಿದ್ದಾರೆ.

Ad
Ad
Nk Channel Final 21 09 2023