Ad

ಪಿಎಸ್​ಐ ಪರಶುರಾಮ್ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ ನೀಡಿದ ರಾಜ್ಯ ಸರ್ಕಾರ

ದಕ್ಷ ಪೊಲೀಸ್ ಅಧಿಕಾರಿ ಪರಶುರಾಮ್  ಸಾವಿನ ಹಿಂದೆ ಅನುಮಾನಗಳ ಹುತ್ತ ಬೆಳೆದಿದ್ದು ಸಚಿವ ಶಿವರಾಜ ತಂಗಡಗಿ ಎದುರು ಕುಟುಂಬ ನ್ಯಾಯಕ್ಕಾಗಿ ಕಣ್ಣೀರಿಟ್ಟಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಯಾದಗಿರಿ: ದಕ್ಷ ಪೊಲೀಸ್ ಅಧಿಕಾರಿ ಪರಶುರಾಮ್  ಸಾವಿನ ಹಿಂದೆ ಅನುಮಾನಗಳ ಹುತ್ತ ಬೆಳೆದಿದ್ದು ಸಚಿವ ಶಿವರಾಜ ತಂಗಡಗಿ ಎದುರು ಕುಟುಂಬ ನ್ಯಾಯಕ್ಕಾಗಿ ಕಣ್ಣೀರಿಟ್ಟಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.

ಪ್ರಕರಣದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮೃತ ಪಿಎಸ್​ಐ ಕುಟುಂಬ ನ್ಯಾಯಕ್ಕಾಗಿ ಮೊರೆ ಇಟ್ಟಿದೆ. ಯಾದಗಿರಿ ನಗರ ಪೊಲೀಸ್ ಸಬ್​ ಇನ್ಸ್​ ಪೆಕ್ಟರ್ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೊದಲು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಮೃತ ಪಿಎಸ್​ಐ ಪತ್ನಿ ಶ್ವೇತಾ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ದೂರು ಸಲ್ಲಿಸಿದ್ದಾರೆ. ಮತ್ತೊಂದೆಡೆ ಪಿಎಸ್​ಐ ಪರಶುರಾಮ್ ಸಾವು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು, ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಿದ್ದಾರೆ.

 

 

 

Ad
Ad
Nk Channel Final 21 09 2023