Ad

ಆದಾಯಕ್ಕಿಂತ‌ ಅಧಿಕ ಆಸ್ತಿ: ಯಾದಗಿರಿ ಡಿಎಚ್ಒ ಅಮಾನತು!

ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪದಿಂದ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ.

ಯಾದಗಿರಿ: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪದಿಂದ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕ ದೂರು ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಲೋಕಾಯುಕ್ತ ದಾಳಿ ನಡೆದಿತ್ತು. ಡಾ. ಪ್ರಭುಲಿಂಗ್ ಮಾನಕರ್ ಅವರ ಯಾದಗಿರಿಯ ಕಚೇರಿ, ಮನೆ ಹಾಗೂ ಕಲಬುರ್ಗಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿತ್ತು.

Ad
Ad
Nk Channel Final 21 09 2023