ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್‌ನಲ್ಲಿ 37 ಜನ ಪ್ರಯಾಣಿಕರನ್ನು ಹೊತ್ತು ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತಿತ್ತು. ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು, ಸ್ಥಳೀಯರ ಸಹಾಯದಿಂದ ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ.

