Showing 20 of 338 posts • Page 6 of 17
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಹಣಕಾಸು ದುರುಪಯೋಗ ಮತ್ತು ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕಿನ ಮೂವರು ಶಾಖಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಕರಾವಳಿ ಮರಾಟಿ ಸಮಾವೇಶವನ್ನು ನ.9ಮತ್ತು 10ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾವಳಿ ಮಾರಾಟಿ ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ್ ತಿಳಿಸಿದರು.
ಐಪಿಎಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳದಲ್ಲಿಯೂ ಮೋನಪ್ಪ ಗೌಡ ಎಂಬ ಕೃಷಿಕರ ಆಸ್ತಿಯನ್ನು ವಕ್ಫ್ ಎನ್ನಲಾಗುತ್ತಿದ್ದು, ಅದಕ್ಕೆ ನ್ಯಾಯಾಲಯಕ್ಕೂ ಹೋದರ ಏನೂ ಆಗದ ಸ್ಥಿತಿ ಇದೆ.
ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ರೀಲ್ಸ್ ರಾಣಿ ಪ್ರತಿಮಾ, ತನ್ನ ಸಹೋದರನಿಗೂ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಅದಿ ಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ಸೈಬರ್ ವಂಚಕರು ಜನಸಾಮಾನ್ಯರನ್ನು ಕುಳಿತಲ್ಲೇ ಬೋಳಿಸುತ್ತಿದ್ದರೆ, ರಾಜಸ್ಥಾನ ಮೂಲದ ಚಾಣಾಕ್ಷ ಕಳ್ಳರಿಬ್ಬರು ಜಾಗತಿಕ ಮಟ್ಟದ ಆಸ್ಟೈನ್ ದೈತ್ಯ ಅಮೆಜಾನ್ ಕಂಪನಿಯನ್ನೇ ದೋಚುವ ಕೆಲಸ ಮಾಡಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ ಎಂಟಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಿಂದೂ ಸಂಘಟನೆಗಳು ಮತ್ತೆ ಧರ್ಮ ದಂಗಲ್ ನಡೆಸೊಕೆ ಸಜ್ಜುಗೊಂಡಿದೆ.
ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಹೂಡ (ಬಿ) ಗ್ರಾಮದಲ್ಲಿ ನಡೆದಿದೆ.
ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.
ಟೀಂ ಯುವ ಟೈಗರ್ಸ್ ಮತ್ತು ಯುವ ಸೇವಾ ಸಂಘ ದುಗ್ಲಿಪದವು ಮಂಚಿ ಇವರ ಪರೋಪಕಾರಾಯ ಪುಣ್ಯಾಯ ಎಂಬ ಕಾರ್ಯಕ್ರಮದಡಿಯಲ್ಲಿ ಅಷ್ಟಮಿ ಹಾಗೂ ನವರಾತ್ರಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಮೊತ್ತದ ವಿತರಣಾ ಸಮಾರಂಭ ದುಗ್ಲಿಪದವು ಸಮುದಾಯ ಭವನದಲ್ಲಿ ನಡೆಯಿತು.
ಕಾಸರಗೋಡಿನ ದೇವಸ್ಥಾನದಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್ ಕಾವು ದೇವಸ್ಥಾನದಲ್ಲಿ ನಡೆದಿದೆ.
ಉಡುಪಿ ಶೈಲಿಯ ಹುಲಿವೇಷ ಕುಣಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಉಡುಪಿ ಶೈಲಿಯ ಹುಲಿ ಕುಣಿತವನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿಯ ಸಮಾನಮನಸ್ಕ ತಂಡಗಳ ಸಂಯೋಜನೆಯಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆಯನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಾಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು.
ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ಇದೇ ಅ. 29ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ಸಂಚಾಲಕ ಅಮೃತ್ ಶೆಣೈ ಹೇಳಿದರು.
ಕಾರಿನಲ್ಲಿ ಬಂದು ಶಸ್ತ್ರಾಸ್ತ್ರಗಳೊಂದಿಗೆ ಮನೆಯೊಳಗೆ ನುಗ್ಗಿ, ಇಬ್ಬರು ಮಕ್ಕಳನ್ನು ಅಪಹರಿಸಿ ಪರಾರಿಯಾಗಿರುವ ಇಬ್ಬರು ಅಪಹರಣಕಾರರಿಗಾಗಿ ಬೆಳಗಾವಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ಹಾವು ಕಡಿದು ಮಂಜೇಶ್ವರ ನಿವಾಸಿ ಯೋರ್ವರು ಮೃತ ಪಟ್ಟ ಘಟನೆ ಮೀಯಪದವು ಎಂಬಲ್ಲಿ ನಡೆದಿದೆ.
ಉದ್ಯೋಗದ ಭರವಸೆ ನೀಡಿ ಲಕ್ಷಾಂತರ ರೂ . ವಂಚಿಸಿದ ಪ್ರಕರಣದ ಆರೋಪಿ ಯಾಗಿರುವ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.