ಕೊಡಗು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಶಾಲನಗರದ ಆನೆಕಾಡು ಬಳಿ ನಡೆದಿದೆ.
ಪೆರಾಜೆಯ ಕಾತಿ೯ಕ್ ಭಟ್ ಮೃತ ದುರ್ದೈವಿ. ಮಡಿಕೇರಿಯಿಂದ ಕುಸಾಲನಗರಕ್ಕೆ ಕಾರು ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ಶಾನೆ. ಪ್ರಕರಣ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

