ಕೊಡಗು : ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (72 ) ಮೃತ ದುರ್ದೈವಿ. ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿದರು.
ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದೆ. ಕೆಲವು ದಿನಗಳಿಂದ ಇದೇ ಆರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿತ್ತು. ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಫಿ ತೋಟದಲ್ಲಿ ಕಾಡಾನೆ ಬೀಡು ಬಿಟ್ಟಿರುತ್ತದೆ. ಕಳೆದ ಹಲವು ತಿಂಗಳಿನಿಂದಲೂ ಕರಡಿಗೋಡು ಸುತ್ತಮುತ್ತಲ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ದಿನನಿತ್ಯ ಕಾಣಿಸಿಕೊಳ್ಳುತ್ತಿದೆ. ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ ವಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.

