ಕೊಡಗು : ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆ ಏಫೆಕ್ಟ್ ನಿಂದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಂಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುರಕ್ಷತಾ ಕ್ರಮವಾಗಿ ರಸ್ತೆಯ ಕೆಳಭಾಗದಲ್ಲಿ ನೆಲೆಸಿರುವ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಲಾಗಿದೆ. ಪೊಲೀಸರು ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

