ಕೊಡಗು : ಅತೀ ವೇಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಪೊನ್ನಂಪೇಟೆ ತಾಲೂಕು ಕಾನೂರು-ಕುಟ್ಟ ಮಾರ್ಗಮಧ್ಯದ ನಾಲ್ಕೇರಿಯಲ್ಲಿ ಘಟನೆ ನಡೆದಿದೆ.
ಕೇರಳ ನೊಂದಣಿ ಹೊಂದಿರುವ ಕಾರು ಪಲ್ಟಿಯಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾರು ಪಲ್ಟಿಯಾಗುತ್ತಿದ್ದಂತೆ ಕಾರಿನೊಳಗಿದ್ದವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಈ ರಸ್ತೆಯಲ್ಲಿ ವಾಹನಗಳು ಅತೀ ವೇಗದಿಂದ ಸಂಚರಿಸುತ್ತವೆ. ಈ ಬಗ್ಗೆ ಪೊಲೀಸರು ವಾಹನಗಳ ವೇಗ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

