ಕೊಡಗು: ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆಯಾಗಿದ್ದಾರೆ ಮಗಳನ್ನು ಕಂಡು ತಂದೆ ಭಾವುಕರಾಗಿದ್ದಾರೆ. ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದರು.

ಪೊಲೀಸ್​, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಶ್ವಾನ ದಳ ಹುಡುಕಾಟ ನಡೆಸಿದರೂ ಶರಣ್ಯಳ ಸುಳಿವೇ ಸಿಕ್ಕಿರಲಿಲ್ಲ. ಇದೀಗ ಪಾಳು ಬಿದ್ದ ಬಂಗಲೆಯೊಂದರಲ್ಲಿ ಯುವತಿ ಪತ್ತೆ ಆಗಿದ್ದಾರೆ. ನಾಪತ್ತೆಯಾಗಿದ್ದ ಕೇರಳ ಮೂಲದ ಶರಣ್ಯ ಐಟಿ ಉದ್ಯೋಗಿಯಾಗಿದ್ದಾರೆ.

ಇದೀಗ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.

View this post on Instagram

A post shared by News Karnataka (@newskarnataka)