ಕೊಡಗು: ಶೌಚಗುಂಡಿ ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹೊಸತೋಟ ಗ್ರಾಮದಲ್ಲಿ ನಡೆದಿದೆ.
ಶುಂಠಿಯನ್ನು ಮನೆಗೆ ತರಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಳೆಯ ಶೌಚಗುಂಡಿ ಏಕಾಏಕಿ ಕುಸಿದ ಪರಿಣಾಮ ನಿತ್ಯಾ (46) ಗುಂಡಿಯೊಳಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಗುಂಡಿಯೊಳಗೆ ಇಳಿದ ಜನಾರ್ಧನ (43) ಅವರೂ ಸಹ ಸಿಲುಕಿಕೊಂಡಿದ್ದಾರೆ.
ವಿಷಕಾರಿ ಅನಿಲದಿಂದಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಅರಿತ ಶಾಸಕ ಮಂಥರ್ ಗೌಡ ಆಸ್ಪತ್ರೆಗೆ ಭೇಟಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

