ಕೊಡಗು : ವರುಣನ ಆರ್ಭಟ ಕೊಡಗು ಜಿಲ್ಲೆಯಲ್ಲಿ ಜೋರಾಗಿದ್ದು, ಜಿಲ್ಲೆಯ ಹಲವೆಡೆ ಕೃಷಿ ಭೂಮಿ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ.
ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಜೋರು ಮಳೆಯಾಗಿದೆ. ಕಾವೇರಿ, ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ಮೂರ್ನಾಡು, ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ.
ನಾಲಾಡಿ, ಕಕ್ಕಬ್ಬೆ ಭಾಗದಲ್ಲಿ ಕಾಫಿ ತೋಟಗಳಿಗೆ ನೀರು ನುಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಎನ್ಡಿಆರ್ಎಫ್ ತಂಡ ಬೀಡುಬಿಟ್ಟಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳಿಗೆ NDRF ಟೀಂ ಭೇಟಿ ನೀಡುತ್ತಿದೆ.
ನದಿ ಪಾತ್ರ, ಬೆಟ್ಟಗುಡ್ಡ ಪ್ರದೇಶಗಳಲ್ಲಿರುವ ಜನ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

