ಕೊಡಗು : ವರುಣನ ಆರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಇಂದು (ಜೂನ್ 12) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆ ಅವಾಂತರ ಎದುರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ ಜಿಲ್ಲೆಯಲ್ಲಿ NDRF ತಂಡ ಬೀಡು ಬಿಟ್ಟಿದೆ. ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶಗಳಿಗೆ NDRF ತಂಡ ಭೇಟಿ ನೀಡಿದೆ. ಬೆಟ್ಟ ಗುಡ್ಡಗಳು ಮತ್ತು ನದಿ ಪಾತ್ರದಲ್ಲಿ ವಾಸ ಮಾಡುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯಲ್ಲಿ ನೀರು ಹೆಚ್ಚಾಗಿದೆ. ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಮನೆ ಮಾಡಿದೆ.

