ಕೋಲಾರ: ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ಕಾಂಗ್ರೆಸ್‌ನ ಕೆ.ವಿ.ಗೌತಮ್‌ ವಿರುದ್ಧ ಬಾಬು ಅವರು 69 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಕುರಿತು ಮಾತನಾಡಿದ ಬಾಬು, ಕ್ಷೇತ್ರದ ಜನತೆಗೆ ಚಿರಋಣಿ. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು. ದೇವೇಗೌಡರು ಮತ್ತು ಕುಮಾರಸ್ವಾಮಿ ನಂಬಿಕೆಯಿಟ್ಟು ಟಿಕೆಟ್ ಕೊಟ್ಟಿದ್ದರು. ಅದಕ್ಕೆ ತಕ್ಕ ಉತ್ತರ ಸಿಕ್ಕಿದೆ. ಎಲ್ಲಾ ಕ್ಷೇತ್ರಗಳಲ್ಲೂ ಬಹುಮತ ಸಿಕ್ಕಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಗ್ಯಾರೆಂಟಿ ವರ್ಕೌಟ್‌ ಆಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಅದರ ಲಾಭ ನಮಗೆ ಸಿಕ್ಕಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡಿದೆ. 6 ಲಕ್ಷ ಮತಗಳನ್ನು ಮತದಾರರು ನೀಡಿದ್ದಾರೆ. ಬಂಗಾರಪೇಟೆಯ ಜನತೆ ನನಗೆ ಬಹುಮತ ನೀಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.