ಕೋಲಾರ : ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ನಂಗಲಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಬ್ರಮಣಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ (ಡಿ.14) 112 ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ.

ಹೀಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಆದ್ರೆ ಅಷ್ಟರಲ್ಲಾಗಲೇ ಮಾರ್ಗಮಧ್ಯೆ ಸುಬ್ರಮಣಿ ಮೃತಪಟ್ಟಿದ್ದಾರೆ. ಹೃದಯಾಘಾತವೇ ಅವರ ಸಾವಿಗೆ ಕಾರಣ ಎನ್ನಲಾಗಿದೆ.