Showing 20 of 36 posts • Page 1 of 2
ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ರಸ್ತೆಗೆ ಉರುಳಿಬಿದ್ದಿದ್ದ ಬೇವಿನ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಕಾಮನೂರ ಗ್ರಾಮದ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು (ಡಿ.17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಾದ್ಲೂರು ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಯಲಬುರ್ಗಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಲಿತ ಮಹಿಳೆಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಕೊಪ್ಪಳ ನಗರದ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ, ಕಾಂಗ್ರೆಸ್ ಮುಖಂಡ ಅರ್ಜುನ್ ಸಾ ಕಾಟ್ವಾ (62) ಅವರ ಮೃತ ದೇಹ ನಗರದ ಬಳಿ ಹುಲಿಕೆರೆಯಲ್ಲಿ ಅ.9ರ ಬುಧವಾರ ಪತ್ತೆಯಾಗಿದೆ.
17 ನೇ ದಿನದ ಗಣಪತಿ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕನಿಗೆ ಚಾಕು ಇರಿದು, ಮೂವರ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಗಂಗಾವತಿ ನಗರದ ಯಶೋದಾ ಆಸ್ಪತ್ರೆ ಎದುರು ನಿನ್ನೆ
ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ದಿಡೀರನೆ ಉದುರಿ ಬಿದ್ದಿದ್ದರಿಂದ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ನಗರದಲ್ಲಿ ನಡೆದಿದೆ.
ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಪ್ರಚೋದನಕಾರಿ ಬಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿಎಫ್ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತರಲು
ಕೊಪ್ಪಳದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಬ್ಯಾನರ್ನಲ್ಲಿ ‘ಫ್ರೀ ಪ್ಯಾಲೆಸ್ತೇನ್’ ಬರಹ ಹಾಕಲಾಗಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ.
“ಮುಖ್ಯಮಂತ್ರಿ ಆಗಬೇಕೆಂದು ಅನೇಕರು ಆಸೆ ಪಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಆದರೆ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ” ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಮಕ್ಕೆ ಟ್ರ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಶಾಲಾ ಮಕ್ಕಳಿದ್ದ ಟಾಟಾ ಏಸ್ ಪಲ್ಟಿಯಾಗಿ ಮೂವತ್ತು ಮಕ್ಕಳಿಗೆ ಗಾಯವಾಗಿರುವ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ.
ಬೀದಿ ದೀಪದ ಕಂಬಗಳ ಮೇಲೆ ಗದೆ, ಬಿಲ್ಲುಬಾಣ, ತಿರುಪತಿ ತಿಮ್ಮಪ್ಪನ ನಾಮದ ಚಿತ್ರವನ್ನು ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಅಳವಡಿಸಲಾಗಿದೆ.
ಬಂಧಿಸುವ ಸನ್ನಿವೇಶ ಬಂದರೇ ಯಾವುದೇ ಮುಲಾಜಿಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ.
ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ 19ನೇ ಗೇಟ್ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ.