ಕೊಪ್ಪಳ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಋಷಿಕೇಶ್ನಲ್ಲಿ ನಡೆದಿದೆ.
ಮೃತರನ್ನು ಸಿದ್ದಯ್ಯ ಹಿರೇಮಠ (32) ಎಂದು ಗುರುತಿಸಲಾಗಿದೆ. ಜೂ.10 ರಂದು ಅವರು ಕೇದಾರನಾಥ ಯಾತ್ರೆಗೆ ತೆರಳಿದ್ದರು. ಕಳೆದ ಹತ್ತು ದಿನಗಳಿಂದ ವಿವಿಧ ಧಾರ್ಮಿಕ ಕ್ಷೇತ್ರಗಳ ದರ್ಶನ ಪಡೆಯುತ್ತಿದ್ದರು. ಇಂದು (ಗುರುವಾರ) ಕೇದಾರನಾಥ್ ದರ್ಶನ ಮುಗಿಸಿಕೊಂಡು ಋಷಿಕೇಶ್ಗೆ ಬಂದಿದ್ದ ವೇಳೆ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ.
ಸಿದ್ದಯ್ಯ ಅವರು ಮೊದಲು ಗವಿಸಿದ್ದೇಶ್ವರ ಮಠದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಸದ್ಯ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

