Showing 20 of 159 posts • Page 1 of 8
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಮೈಶುಗರ್ ಕಾರ್ಖಾನೆ ಬಾಯ್ಲರ್ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯದ ಹೊರವಲಯದ ಇಂಡುವಾಳು ಗ್ರಾಮದ ಬಳಿ ನಡೆದಿದೆ. ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೃದಯಾಘಾತದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ. ಎಸ್.ಸಿ.ಎಂ.ಎಂ ಫ್ರೌಡಶಾಲೆಯ 9 ನೇ ತರಗತಿಯ ವೀರಮಣಿ (14) ಸಾವಿಗೀಡಾದ ವಿದ್ಯಾರ್ಥಿ.
ಖಾಸಗಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಕಾವೇರಿ ನದಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆ ಆರಂಭವಾಗಿದೆ.
ಮಂಡ್ಯ ಸೆಸ್ಕಾಂ ಎಇ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬವೊಂದರ ಮೇಲೆ ಪುಂಡರ ಗುಂಪೊಂದು ಮನಸ್ಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜುಲೈ 5ರ ರಾತ್ರಿ ನಡೆದಿದೆ.
ಜಮೀನಿನಲ್ಲಿ ಅಳವಡಿಸಲಾದ ಬೋರ್ ವೆಲ್ ಹಾಗೂ ಪಂಪ್ ಸೆಟ್ ಗಳ ಕೇಬಲ್ ಕಳವು ಮಾಡುತ್ತಿದ್ದ ಖದೀಮರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಮಂಡ್ಯ ಜಿಲ್ಲೆ ಉಪ್ಪರಕನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಳ್ಳರನ್ನ ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು ಥಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.
ನೆನ್ನೆ ಮಳವಳ್ಳಿ ತಾಲೂಕಿನ ಮುತತ್ತಿ ಬಳಿಯ ಕಾವೇರಿ ನದಿಯಲ್ಲಿ ಘೋರ ದುರಂತ ಸಂಭವಿಸಿದೆ.
ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇಗುಲದ ಹುಂಡಿ ಹಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ ಸೇರಿದಂತೆ 6 ಮಂದಿಯನ್ನ ಅಮಾನತುಗೊಳಿಸಲಾಗಿದೆ.
ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಆರ್ ಐ ಬಿದ್ದಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.ಮನೆಯಲ್ಲಿ ತಾಯಿ ಹಾಗೂ ಮಗ ಮೃತದೇಹ ಪತ್ತೆಯಾಗಿದೆ.ಬಟ್ಟೆ ಅಂಗಡಿಯಲ್ಲಿ ತಂದೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ಯೆಯಾಗಿದ್ದಾರೆ.
ಪತ್ನಿ, ಮಗನನ್ನು ಉಸಿರುಗಟ್ಟಿಸಿ ಕೊಂದು ಗಂಡನು ನೇಣಿಗೆ ಶರಣಾದ ಘಟನೆ ಇಲ್ಲಿನ ನೆಹರು ನಗರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಒಂದೇ ಕುಟುಂಬದ ಮೂವರು ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದೆ.
: ಗೇಟ್ ಹಾರಿ ಮನೆ ಆವರಣಕ್ಕೆ ಚಿರತೆ ಪ್ರವೇಶಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ.
ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದ ಘಟನೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.