ಮಂಡ್ಯ: ಭೂತನಹೊಸೂರು ಗ್ರಾಮದ ರೈತರ ಜಮೀನೊಂದರಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ನಾಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಕಳೆದ ಒಂದು ವಾರದಿಂದ ಗ್ರಾಮದಲ್ಲಿ 2 ಕುರಿ ಚಿರತೆಗೆ ಬಲಿಯಾಗಿವೆ.

ಚಿರತೆ ಪ್ರತ್ಯಕ್ಷದಿಂದ ಸುತ್ತಮುತ್ತಲ ಗ್ರಾಮಸ್ಥರು ಗದ್ದೆಗೆ ತೆರಳಲು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ, ಚಿರತೆ ಮರಿಗಳನ್ನ ರಕ್ಷಿಸಿದ್ದಾರೆ. ತಾಯಿ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.