ಮಂಡ್ಯ: ಸರ್ಕಾರಿ ಬಸ್ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.
ಬಸ್ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

