ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಲಿಂಗಾಪುರ ಕೆರೆಯಲ್ಲಿ ನಡೆದಿದೆ.

ಅರುಣ್ ಕುಮಾರ್ (26) ಕೆರೆಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿ. ತಂದೆ ಜೊತೆ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಅರುಣ್ ಕುಮಾರ್. ಕಾಲು ಜಾರಿ ಕೆರೆಯ ಆಳವಾದ ಕೆಸರಿನ ಗುಂಡಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತಂದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.