ಮಂಡ್ಯ: ಮರಕ್ಕೆ ನೇಣುಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಈದ್ಗಾ ಮೈದಾನದ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯ ವಿವರ ತಿಳಿದು ಬಂದಿಲ್ಲ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಶವಗಳು ಕೊಳೆತು ದುರ್ವಾಸನೆ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕೆ.ಆರ್.ಎಸ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

