ಮಂಡ್ಯ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾ ಒಳಗೆರೆ ಮೆಣಸ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ರಂಗನಾಥಪುರದ ಕಿರಣ್(27) ಸ್ಥಳದಲ್ಲೇ ಸಾವಿಗೀಡಾದ ಬೈಕ್ ಸವಾರ. ಗುಂಡ, ಯಶವಂತ್ ಗಂಭೀರ ಗಾಯಗೊಂಡ ಬೈಕ್ ಸವಾರರು. ಕಿರಣ್, ಗುಂಡ, ಯಶವಂತ್, ಒಂದೇ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

