ಮಂಡ್ಯ: ಕಾವೇರಿ ನದಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಕಾವೇರಿ ನದಿ ನೀರಿನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತೆ ಪ್ರತಿಭಟನೆ ತೀವ್ರಗೊಂಡಿದೆ. CWMA ಆದೇಶ ಪಾಲನೆಗೆ ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಮಂಡ್ಯದಲ್ಲಿ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
KRSನಿಂದ ನೀರು ಹರಿಯುತ್ತಿದೆ ಎಂಬ ಆರೋಪ ಒಂದೆಡೆಯಾದರೆ, ತಮ್ಮ ಬೆಳೆಗಳಿಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ ಎಂಬ ಆಕ್ರೋಶ ಭುಗಿಲೆದ್ದಿದೆ. ಇದರ ನಡುವೆ ಆಗಸ್ಟ್ 24ರ ಸುಪ್ರೀಂ ಕೋರ್ಟ್ ವಿಚಾರಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಮುಂದಿನ ಹೋರಾಟಕ್ಕೆ ಮಂಡ್ಯದ ರೈತರು ಸಜ್ಜಾಗಿದ್ದಾರೆ.

