ಮಂಡ್ಯ,: ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೆಳೆದಿದ್ದ ಮರಗಳಿಗೆ ಕಿಡಿಗೇಡಿಗಳು ಕತ್ತರಿ ಹಾಕಿದ್ದಾರೆ. ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದ್ದು, ಅನುಮತಿ ಇಲ್ಲದೇ ಮರ ಕಡಿದ ಬಗ್ಗೆ ಸಾರ್ವಜನಿಕರ ದೂರು ನೀಡಿದ್ದಾರೆ.


ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮರ ಕಡಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಶಿಂಷಾ ನದಿ ಒತ್ತುವರಿ ಮಾಡಿಕೊಂಡಿದ್ದರು ಕಣ್ಮುಚ್ಚಿ ಕುಳಿತ ಅಧಿಕಾರಿಗಳ ವಿರುದ್ಧವೂ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



