ಮಂಡ್ಯ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ.
ದಿವ್ಯ(25) ಹಾಗೂ ದರ್ಶನ್(29) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕಾರು ಚಾಲಕ ವೃತ್ತಿಯ ಜೊತೆಗೆ ಕೃಷಿ ಮಾಡುತ್ತಿದ್ದ ಮೃತ ದರ್ಶನ್.ಪತ್ನಿ ದಿವ್ಯ ಪ್ಯಾರಾಮೆಡಿಕಲ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ದಿವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತ್ನಿ ಆತ್ಮಹತ್ಯೆ ಬಳಿಕ ಪತ್ನಿ ಕುಟುಂಬಕ್ಕೆ ವಿಡಿಯೋ ಕಾಲ್ ಮಾಡಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ಕಂಡು ಎರಡು ವರ್ಷದ ಮಗಳ ಕತ್ತು ಹಿಸುಕಿ ಸಾಯಿಸಲು ಯತ್ನ ನಡೆದಿದೆ. ಅದೃಷ್ಟಾವಶಾತ್ ಪ್ರಜ್ಞೆ ತಪ್ಪಿದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗು ಮೃತಪಟ್ಟಿದೆ ಎಂದು ತಿಳಿದು ದರ್ಶನ್ ಕೂಡ ನೇಣಿಗೆ ಶರಣಾಗಿದ್ದಾನೆ. ದಿವ್ಯ-ದರ್ಶನ್ ಮೂಲತಃ ಕೆ.ಆರ್. ಪೇಟೆ ತಾಲ್ಲೂಕು ಹೊಸಕೋಟೆ ಗ್ರಾಮದವರು.ಕೆ.ಆರ್.ಪೇಟೆ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

